ಕ್ವಿಕ್ ಲಿಂಕ್ಸ್
ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ ಹಿನ್ನೆಲೆ ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರಿದಿದೆ. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ್ದಾರೆ. ಖಾಲಿ ಬಿಂದಿಗೆಗಳನ್ನ ಪ್ರದರ್ಶಿಸಿ ರಾಜ್ಯ ಸರ್ಕಾರ, ಸಂಸದರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ರಾಜ್ಯ ಸರ್ಕಾರ ಖಾಲಿ ಬಿಂದಿಗೆ ಕೊಟ್ಟಿದೆ ಎಂದು ಘೋಷಣೆ ಕೂಗುತ್ತಿದ್ದಾರೆ. ಹೋರಾಟಕ್ಕೆ ಕನ್ನಡಸೇನೆ ಕಾರ್ಯಕರ್ತರು ಸಾಥ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಬೆಳ್ಳಂ ಬೆಳ್ಳಗ್ಗೆ ಐಟಿ ದಾಳಿ ನಡೆದಿದೆ. ನಗರದ 15 ಕಡೆ ಐಟಿ ರೇಡ್ ನಡೆದಿದ್ದು, ಉದ್ಯಮಿಗಳು ಹಾಗೂ ಜ್ಯುವೆಲರಿ ಶಾಪ್ ಮೇಲೆ ಐಟಿ ದಾಳಿಯಾಗಿದೆ. ಸರ್ಜಾಪುರ ಬಳಿಯ ಮುಳ್ಳೂರು , ಆರ್ ಎಂ.ವಿ ಎಕ್ಸ್ಟೆನ್ಷನ್ , ಬಿಇಎಲ್ ಸರ್ಕಲ್ , ಮಲ್ಲೇಶ್ವರಂ, ಡಾಲರ್ಸ್ ಕಾಲೋನಿ ಸೇರಿದಂತೆ 15 ಕ್ಕೂ ಹೆಚ್ಚು ಕಡೆ ದಾಳಿ ತೆರಿಗೆ ವಂಚಕರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆದಿದ್ದು, ಮತ್ತಿಕೆರೆ, ಡಾರ್ಲಸ್ಸ್ ಕಾಲೋನಿ ಸೇರಿದಂತೆ ಹಲವೆಡೆ ದಾಳಿಯಾಗಿದೆ. ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ಈ ದಾಳಿ ನಡೆದಿದೆ. ಕಳೆದ ವಾರ…
ರಾಜಧಾನಿಯಲ್ಲಿ ಮುಂದಿನ ತಿಂಗಳು ನಡೆಯಲಿರುವ ಕಂಬಳ ಓಟದ ಸ್ಪರ್ಧೆಗೆ ಅಗತ್ಯ ಸಹಾಯಧನ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಅರಮನೆ ಮೈದಾನದಲ್ಲಿ ಬುಧವಾರ 'ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆಪೂಜೆ' ನೆರವೇರಿಸಿ ಮಾತನಾಡಿದ ಅವರು 'ನಾಡಿನ ಹೆಮ್ಮೆಯ ಇತಿಹಾಸ, ದೇಶೀಯ ಹಾಗೂ ಐತಿಹಾಸಿಕವಾದ ಕಂಬಳಕ್ಕೆ ಹೆಚ್ಚಿನ ಸಹಕಾರ ನೀಡಲಾಗುವುದು. 20 ಕಂಬಳಗಳಿಗೆ ತಲಾ 5 ಲಕ್ಷ ರು.ನಂತೆ 1 ಕೋಟಿ ಸಹಾಯಧನ ನೀಡಲಾಗುವುದು. ಈ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಜತೆ ಚರ್ಚೆ ನಡೆಸಲಾಗುವುದು' ಎಂದು ಹೇಳಿದರು. "ನಮ್ಮ ಸಂಸ್ಕೃತಿಯೇ…
ರೋಹಿತ್ ಶರ್ಮಾ ಸ್ಫೋಟಕ ಸೆಂಚುರಿ, ಇಶಾನ್ ಕಿಶನ್ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ 2ನೇ ಗೆಲುವು ದಾಖಲಿಸಿದೆ. ಆಫ್ಘಾನಿಸ್ತಾನ ನೀಡಿದ 273 ರನ್ ಟಾರ್ಗೆಟ್‌ನ್ನು ಭಾರತ 35 ಓವರ್‌ಗಳಲ್ಲಿ ಚೇಸ್ ಮಾಡಿ ಗೆಲುವಿನ ಕೇಕೆ ಹಾಕಿದೆ. ಭರ್ಜರಿ 8 ವಿಕೆಟ್ ಗೆಲುವು ದಾಖಲಿಸಿದ ಭಾರತ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಆಫ್ಘಾನಿಸ್ತಾನ ನಾಯಕ ಹಶ್ಮತುಲ್ಹಾ ಶಾಹಿದಿ ಸಿಡಿಸಿದ 80 ರನ್ ಹಾಗೂ ಅಜ್ಮುತುಲ್ಹಾ ಒಮರಾಜೈ ಸಿಡಿಸಿದ 62 ರನ್‌ಗಳಿಂದ ಭಾರತ ವಿರುದ್ದ 8…
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಆಗುತ್ತಿರುವುದು ಸಂತೋಷದ ವಿಚಾರ. ಆದರೆ, ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದಕ್ಕೆ ನನ್ನ ವಿರೋಧವಿದೆ ಎಂದು ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು. ಪಟ್ಟಣದ ಅವರ ನಿವಾಸದಲ್ಲಿ ಮಾತನಾಡಿ, ಪ್ರಸ್ತುತ ಸುಮಲತಾ ಅಂಬರೀಶ್ ಮಂಡ್ಯ ಕ್ಷೇತ್ರದ ಸಂಸದೆಯಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಅವರನ್ನು ಬೆಂಬಲಿಸಿತ್ತು. ಈಗ ಸುಮಲತಾ ಅವರು ಬಿಜೆಪಿ ಪಕ್ಷವನ್ನು ಬೆಂಬಲಿಸಿದ್ದಾರೆ. ಅವರೊಂದು ರೀತಿ ಬಿಜೆಪಿ ಪಕ್ಷದ ಸಂಸದೆಯೇ ಆಗಿದ್ದಾರೆ. ಹಾಗಾಗಿ ಮುಂಬರುವ ಚುನಾವಣೆಯಲ್ಲೂ ಸುಮಲತಾ ಅವರಿಗೇ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು. ಜೆಡಿಎಸ್…
ಮೈಸೂರು: ಕರ್ನಾಟಕ ಬಂದ್ ಹಿನ್ನೆಲೆ ಮೈಸೂರು ಭದ್ರತೆಗೆ 2000 ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಬಲವಂತವಾಗಿ ಬಂದ್ ಮಾಡಲು ಅವಕಾಶವಿಲ್ಲ. ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ ಸಮಾಜಘಾತ ಕೃತ್ಯಗಳನ್ನ…
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಅರಮನೆ ಆಡಳಿತ ವತಿಯಿಂದ ಮಾವುತರು ಮತ್ತು…
ಮಂಡ್ಯ: ನಗರದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತ ಕೈ ಕೊಯ್ದುಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ. ಸದ್ಯಹೋರಾಟಗಾರನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ಯುಲು ಯತ್ನಿಸಿದರು. ಆದರೆ ಹೋರಾಟಗಾರ ಶ್ರೀನಿವಾಸ್ ಆಸ್ಪತ್ರೆಗೆ ಹೋಗಲು ನಿರಾಕರಿಸಿದರು. ಈ ವೇಳೆ ಪೊಲೀಸರು ಗಾಯ ಮಾಡಿಕೊಂಡು ಪ್ರತಿಭಟನೆ ಮಾಡಬೇಡಿ.…
Sign in to your account